Monday, 14th October 2024

ಪಂಜಾಬ್‌’ನಲ್ಲಿ ಮಾಜಿ ಕ್ರಿಕೆಟಿಗ ಸಿದ್ದು ನೂತನ ’ಕೈ’ ಸಾರಥಿ

ನವದೆಹಲಿ: ಪಂಜಾಬ್​ನಲ್ಲಿ ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧು ಕೈಗೆ ಕಾಂಗ್ರೆಸ್ ಬ್ಯಾಟ್​ ಸಿಕ್ಕಿದೆ. ಪಂಜಾಬ್​ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನೇಮಕಗೊಂಡಿದ್ದಾರೆ.

ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸಂಗತ್ ಸಿಂಗ್ ಗಿಲ್ಜಿಯನ್, ಸುಖ್​ವಿಂದರ್ ಸಿಂಗ್ ಡ್ಯಾನಿ, ಪವನ್ ಗೋಯೆಲ್​, ಕುಲ್ಜಿತ್ ಸಿಂಗ್ ನಗ್ರ ನೇಮಕಗೊಂಡಿದ್ದಾರೆ. ಪಂಜಾಬ್​ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ವಿರೋಧದ ನಡುವೆಯೂ ಸಿಧುಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ಸಿಧು ಅವರನ್ನು ಕಾಂಗ್ರೆಸ್ ನ ಪಂಜಾಬ್ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇಮಕಗೊಳಿಸಿದ್ದಾರೆ. ನಿರ್ಗಮಿತ ಅಧ್ಯಕ್ಷ ಸುನಿಲ್ ಜಖರ್ ಅವರ ಕೊಡುಗೆಯನ್ನು ಮೆಚ್ಚುತ್ತದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ.