ನವದೆಹಲಿ: ಉತ್ತರ ದೆಹಲಿಯ ಖೇಡಾ ಪ್ರದೇಶದ ಮನೆಯೊಂದರಲ್ಲಿ 4 ಜನರ ಮೃತ ದೇಹಗಳು ಪತ್ತೆಯಾಗಿವೆ. ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಕೋಣೆಯಲ್ಲಿಅಗ್ಗಿಸ್ಟಿಕೆ ಉರಿಯುತ್ತಿತ್ತು. ಮನೆಯ ಸದಸ್ಯರು ಚಳಿಯಿಂದ ಪಾರಾಗಲು ಅಗ್ಗಿಸ್ಟಿಕೆ ಹಚ್ಚಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೊಗೆಯಿಂದ ಉಸಿರುಗಟ್ಟಿ ಎಲ್ಲರೂ ಸಾವನ್ನಪ್ಪಿದ್ದಾರೆ.
ಗಂಡ-ಹೆಂಡತಿ ಮತ್ತು ಅವರ 7 ಮತ್ತು 8 ವರ್ಷದ ಇಬ್ಬರ ಮಕ್ಕಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಜೆಯವರೆಗೂ ಮನೆಯವರು ಬಾಗಿಲು ತೆರೆಯದಿದ್ದಾಗ ಅಕ್ಕಪಕ್ಕದ ಮನೆಯವರು ಅನುಮಾನಗೊಂಡು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿ ದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.