Saturday, 14th December 2024

18-59 ವರ್ಷದೊಳಗಿನವರಿಗೆ ಉಚಿತ ಬೂಸ್ಟರ್ ಡೋಸ್: ಬಿಹಾರ ಸರ್ಕಾರ

ಪಾಟ್ನಾ: ಬಿಹಾರ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಉಚಿತವಾಗಿ ಬೂಸ್ಟರ್ ಡೋಸ್ ನೀಡಲು ಒಪ್ಪಿಗೆ ನೀಡಿದೆ.

18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 18 ರಿಂದ 59 ವರ್ಷದೊಳಗಿನ ಎಲ್ಲರಿಗೂ ಉಚಿತವಾಗಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ನೀಡುವುದಾಗಿ ಬಿಹಾರ ಸರ್ಕಾರ ಘೋಷಣೆ ಮಾಡಿದೆ. ಆರೋಗ್ಯ ಸಚಿವ ಮಂಗಲ್ ಪಾಂಡೆ 5.25 ಕೋಟಿ ಜನರು ಈ ಘೋಷಣೆ ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.

ಉಚಿತವಾಗಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ನೀಡಲು 1314 ಕೋಟಿ ರೂ.ಗಳನ್ನು ವೆಚ್ಚ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 583.43 ಕೋಟಿ ರೂ. ವೆಚ್ಚ ಮಾಡಲಾಗು ತ್ತದೆ.

ಬಿಹಾರ ಸರ್ಕಾರ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಈಗಾಗಲೇ ಉಚಿತವಾಗಿ ಬೂಸ್ಟರ್ ಡೋಸ್ ಲಸಿಕೆ ನೀಡುತ್ತಿದೆ. ಈಗ 18 ರಿಂದ 59ರ ವಯೋಮಾನ ದವರಿಗೂ ಉಚಿತವಾಗಿ ಬೂಸ್ಟರ್ ಡೋಸ್ ನೀಡುವುದಾಗಿ ಘೋಷಣೆ ಮಾಡಿದೆ.

ಭಾರತದಲ್ಲಿ 24 ಗಂಟೆಯಲ್ಲಿ 1,247 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದ ಸಕ್ರಿಯ ಪ್ರಕರಣಗಳು 11,860 ಆಗಿದೆ.