ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿ ಕೇಂದ್ರ ಸರ್ಕಾರ 80 ಕೋಟಿ ಗೂ ಹೆಚ್ಚು ಜನರಿಗೆ ಉಚಿತವಾಗಿ ಆಹಾರ ವಸ್ತುಗಳ ವಿತರಣೆಯ ಯೋಜನೆ ಇನ್ನೂ ಎರಡು ವರ್ಷ ಮುಂದುವರಿಯಲಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಐದನೇ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ . ಕಳೆದ ವರ್ಷ ಕೇಂದ್ರ ಸರ್ಕಾರವು 2023 ರ ಡಿಸೆಂಬರ್ವರೆಗೂ ಉಚಿತ ಆಹಾರಧಾನ್ಯಗಳನ್ನು ವಿತರಿಸಲು ನಿರ್ಧರಿಸಲಾಗಿತ್ತು. ಇದೀಗ 2024 ರವರೆಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ.
ಈ ಯೋಜನೆಯಡಿ 81 ಕೋಟಿಗೂ ಹೆಚ್ಚು ಅರ್ಹ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ತೀರಾ ಅಗ್ಗದ ಬೆಲೆಯಲ್ಲಿ ಅಕ್ಕಿ , ಗೋಧಿ , ಸಕ್ಕರೆ ಇತ್ಯಾದಿ ಅಗತ್ಯ ಆಹಾರವಸ್ತುಗಳನ್ನು ನೀಡುತ್ತದೆ . ಕೋವಿಡ್ ವೇಳೆ ಈ ಉಚಿತ ಆಹಾರಧಾನ್ಯ ವಿತರಣೆ ಕೋಟ್ಯಂತರ ಜನರಿಗೆ ಅನುಕೂಲವಾಗಿತ್ತು.
ಇದೇ ವೇಳೆ, ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟಪ್ಗಳಿಗೆ ಉತ್ತೇಜನ ಕೊಡಲು ಸರ್ಕಾರ ಅಗ್ರಿಕಲ್ಚರ್ ಆಕ್ಸಲರೇಟರ್ ಫಂಡ್ ಅನ್ನು ಸ್ಥಾಪಿ ಸಿದೆ.
Read E-Paper click here