Sunday, 24th November 2024

ಬದಲಾವಣೆ ಕಾಣದ ಇಂಧರ ದರ: ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 94.22 ರೂ

#Petrol #Diesel

ನವದೆಹಲಿ: ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿರುವ ಪೆಟ್ರೋಲ್, ಡೀಸೆಲ್ ದರವು ತಟಸ್ಥವಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ 12ನೇ ದಿನ ತೈಲ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿಕೊಂಡಿವೆ.

ಪೆಟ್ರೋಲ್‌, ಡೀಸೆಲ್ ದರ ಸದ್ಯ ಏರಿಕೆ ಆಗದಿದ್ದರೂ, ಈಗಾಗಲೇ ದೇಶದ ಬಹುತೇಕ ಎಲ್ಲಾ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ತುಂಬಾನೆ ಹೆಚ್ಚಿದೆ.

ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿ ಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರ ನೀಡುತ್ತವೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.17 ರೂ. ಮತ್ತು ಡೀಸೆಲ್ ದರ 81.47 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.35 ರೂ. ಮತ್ತು ಡೀಸೆಲ್ ದರ 84.35 ರೂ.

ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 97.57 ರೂ. ಮತ್ತು ಡೀಸೆಲ್ ದರ 88.60 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.22 ರೂ. ಮತ್ತು ಡೀಸೆಲ್ ದರ 86.37 ರೂ.

ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.19 ರೂ. ಮತ್ತು ಡೀಸೆಲ್ ದರ 86.53 ರೂ.