Friday, 22nd November 2024

ತೈಲೋತ್ಪನ್ನಗಳ ದರ: ಬೆಂಗಳೂರಿನಲ್ಲಿ 100.82 ರೂ., ನವದೆಹಲಿಯಲ್ಲಿ 97.56ರೂ. ಏರಿಕೆ

ನವದೆಹಲಿ: ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತೀ ಲೀಟರ್ ಗೆ 29 ಪೈಸೆ ಮತ್ತು ಡೀಸೆಲ್ ದರ 28 ಪೈಸೆಯಷ್ಟು ಏರಿಕೆಯಾಗಿದೆ.

ಮಂಗಳವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ಈ ಮೂಲಕ ದೇಶದ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 27 ರಿಂದ 29 ಮತ್ತು ಡೀಸೆಲ್ ದರ 26 ರಿಂದ 28 ಪೈಸೆಯವರೆಗೂ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.82 ರೂಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.72ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 97.56ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 88.29ರೂ.ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 103.69ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 95.77ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 97.44ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 91.13 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.7ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.88 ರೂ ಗೆ ಏರಿಕೆಯಾಗಿದೆ.