Sunday, 8th September 2024

ಬೆಂಗಳೂರಿನಲ್ಲಿ ರೂ.105ರ ಗಡಿ ದಾಟಿದ ಪೆಟ್ರೋಲ್ ಬೆಲೆ, ಉಳಿದೆಡೆ…?

ನವದೆಹಲಿ: ದೇಶಾದ್ಯಂತ ಪೆಟ್ರೋಲ್ ದರ 36 ಪೈಸೆ ಮತ್ತು ಡೀಸೆಲ್ ದರ 17 ಪೈಸೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ ರೂ.105ರ ಗಡಿ ದಾಟಿದಂತಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು ಗುರುವಾರ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರ 17 ಪೈಸೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105ಕ್ಕೆ, ಡೀಸೆಲ್ ದರ 95.32 ರೂ ಗೆ ಏರಿಕೆಯಾಗಿದೆ. ನವದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.6ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.93ರೂ ಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 107.6ಕ್ಕೆ, ಡೀಸೆಲ್ ದರ 97.51 ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪೆಟ್ರೋಲ್ ದರ 101.8ಕ್ಕೆ, ಡೀಸೆಲ್ ದರ 93.08 ರೂ ಗೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

error: Content is protected !!