Wednesday, 11th December 2024

ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ

ನವದೆಹಲಿ: ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದೆ.

ಡಿಸೇಲ್‌ಗೆ ಪ್ರತಿ ಲೀಟರ್‌ 4 ರೂ ಹೆಚ್ಚಳವಾದರೆ, 2.5ರೂ ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ ಹೆಚ್ಚಳವಾಗಲಿದೆ ಎನ್ನಲಾಗಿದೆ. ಇನ್ನೂ ನೂತನ ದರಗಳು ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆಲ್ಕೋಹಾಲ್‌ ಮೇಲಿನ ತೆರಿಗೆಯನ್ನು ಶೇ 100ಕ್ಕೆ ಹೆಚ್ಚಳ ಮಾಡಲಾಗಿದೆ.