Saturday, 14th December 2024

ಸ್ಥಿರತೆ ಕಾಯ್ದುಕೊಂಡ ಇಂಧನ ದರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿ ಕೊಂಡಿವೆ. ದೇಶದ ಬಹುತೇಕ ಎಲ್ಲಾ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ತುಂಬಾನೆ ತುಟ್ಟಿಯಾಗಿದೆ.

ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ? 

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.17 ರೂ. ಮತ್ತು ಡೀಸೆಲ್ ದರ 81.47 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.35 ರೂ. ಮತ್ತು ಡೀಸೆಲ್ ದರ 84.35 ರೂ.

ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 97.57 ರೂ. ಮತ್ತು ಡೀಸೆಲ್ ದರ 88.60 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.22 ರೂ. ಮತ್ತು ಡೀಸೆಲ್ ದರ 86.37 ರೂ.

ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.19 ರೂ. ಮತ್ತು ಡೀಸೆಲ್ ದರ 86.53 ರೂ.