ಸತತ ಒಂಬತ್ತನೇ ದಿನವೂ ಇಂಧನ ದರ ಸ್ಥಿರವಾಗಿದೆ. ನವೆಂಬರ್ 3ನೇ ತಾರೀಕಿನಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಮನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು.
ನಿರಂತರ ಏರಿಕೆ ಕಾಣುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆ ನೋಡಿ ವಾಹನ ಸವಾರರು ಆಕ್ರೋಶ ಹೊರ ಹಾಕಿದ್ದರು. ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆ ಆಯಿತು.
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ಮುಂಬೈ ನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂ. ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ಇದೆ.
ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ನಿಗದಿಯಾಗಿದೆ. ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 95.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 87.01 ರೂಪಾಯಿ ನಿಗದಿಯಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ನಿಗದಿ ಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿ ಯಾಗಿದೆ. ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 94.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 80.90 ರೂಪಾಯಿ ನಿಗದಿಯಾಗಿದೆ.