ನವದೆಹಲಿ : ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ ಭಾರತದಲ್ಲಿ ಒಂದು ದಿನದ ರಾಜ್ಯ ಶೋಕಾಚರಣೆ ಆಚರಿಸಲು ನಿರ್ಧರಿಸಲಾಗಿದೆ.
ಗೃಹ ಸಚಿವಾಲಯ (MHA) ಹೇಳಿಕೆ ಬಿಡುಗಡೆ ಮಾಡಿದ್ದು,”ಅಗಲಿದ ಗಣ್ಯರಿಗೆ ಗೌರವದ ಸಂಕೇತವಾಗಿ, ಮೇ 21 ರಂದು ಭಾರತದಾದ್ಯಂತ ಒಂದು ದಿನದ ರಾಜ್ಯ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ.
ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಭಾರತದಾದ್ಯಂತದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವು ಅರ್ಧಮಟ್ಟದಲ್ಲಿ ಹಾರಾಡುತ್ತದೆ ಮತ್ತು ಆ ದಿನ ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ” ಎಂದಿದೆ.
ಅಂದ್ಹಾಗೆ, ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಭಾನುವಾರ (ಮೇ 19) ಅಜೆರ್ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಅವರೊಂದಿಗೆ ಅಣೆಕಟ್ಟು ಉದ್ಘಾಟ ನೆಗೆ ತೆರಳುತ್ತಿದ್ದರು. ಈ ವೇಳೆ ಅವರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಆದಾಗ್ಯೂ, ಅವರ ಬೆಂಗಾವಲು ಪಡೆಯಲ್ಲಿದ್ದ ಎರಡು ಹೆಲಿಕಾಪ್ಟರ್ಗಳು ಸುರಕ್ಷಿತವಾಗಿ ತಮ್ಮ ಗಮ್ಯಸ್ಥಾನವನ್ನ ತಲುಪಿದವು. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಇರಾನ್ನ ಭದ್ರತಾ ಪಡೆಗಳು ಮತ್ತು ರಕ್ಷಣಾ ಅಧಿಕಾರಿಗಳ ತಂಡವು ಸ್ಥಳಕ್ಕೆ ಧಾವಿಸಿತು.