ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ರಾಹುಲ್ ಗಾಂಧಿ ಅವರು ಏ.6 ರಂದು ಅಹಮದಾಬಾದ್‌ನಲ್ಲಿ ಗಾಂಧಿ ಸಂದೇಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಯಾತ್ರೆ ಗುಜರಾತ್‌ನ ಪ್ರತಿ ಜಿಲ್ಲೆಗಳಲ್ಲಿ ಹಾದು ಹೋಗಲಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಏ.6 ರಂದು ಗುಜರಾತ್‌ಗೆ ಭೇಟಿ ನೀಡುತ್ತಿದ್ದಾರೆ. ಐತಿಹಾಸಿಕ ಗಾಂಧಿ ಸಂದೇಶ ಯಾತ್ರೆಯನ್ನು ರಾಹುಲ್ ಗಾಂಧಿ ಅವರು ಸಬರಮತಿ ಆಶ್ರಮದಿಂದ ಆರಂಭಿಸಲಿದ್ದಾರೆ. ಈ ಯಾತ್ರೆಯು ದೆಹಲಿಯ ದಿವಂಗತ ರಾಜೀವ್ ಗಾಂಧಿಯವರ ಸಮಾಧಿ ವೀರ್ ಭೂಮಿಯಲ್ಲಿ ಮುಕ್ತಾಯಗೊಳ್ಳಲಿದೆ.
ಹಿರಿಯ ಗುಜರಾತ್ ಕಾಂಗ್ರೆಸ್ ನಾಯಕ ಅರ್ಜುನ್ ಮೊದ್ವಾಡಿಯಾ ಅವರು ಭಾಸ್ಕರ್ ಅವರೊಂದಿಗೆ ಗಾಂಧಿ ಸಂದೇಶ ಯಾತ್ರೆಯ ಬಗ್ಗೆ ಮಾಹಿತಿ ನೀಡಿದ್ದಾರೆ. 1930ರ ಏ.6ರಂದು ಮುಕ್ತಾಯಗೊಂಡ ಭಾರತದ ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ದಿನದಂದು ಈ ದಂಡಿ ಯಾತ್ರೆ ನಡೆಯಲಿದೆ.
ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸಂಸ್ಥಾಪನಾ ದಿನವಾದ ಏ.6 ರಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಏ.21 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮವನ್ನು ದಾಹೋದ್ ನಲ್ಲಿ ಆಯೋಜಿಸಲಾಗಿದೆ.