ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಪುಣ್ಯ ತಿಥಿ ದಿನದಂದು ಅಮೆರಿಕದ ಕ್ಯಾಲಿಫೋರ್ನಿಯಾದ ಡೇವಿಸ್ ನಗರದ ಸೆಂಟ್ರಲ್ ಪಾರ್ಕ್ ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.
ಜನವರಿ 28ರಂದು ದುಷ್ಕರ್ಮಿಗಳು ಕ್ಯಾಲಿಫೋರ್ನಿಯಾದ ಡೇವಿಸ್ ಸೆಂಟ್ರಲ್ ಪಾರ್ಕ್ ನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಗೊಳಿಸಲಾಗಿತ್ತು. ಪ್ರತಿಮೆಯನ್ನು ಭಾರತ ಸರ್ಕಾರ 2016ರಲ್ಲಿ ಉಡುಗೊರೆಯಾಗಿ ನೀಡಿತ್ತು.
ಪ್ರಪಂಚವೇ ನೆಚ್ಚಿಕೊಂಡ ನಾಯಕನ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಕ್ರಮ ದುರುದ್ದೇಶಪೂರ್ವಕವಾಗಿದ್ದು ಖಂಡನೀಯ ಕೃತ್ಯವೆಂದು ವಿದೇಶಾಂಗ ಸಚಿವಾಲಯ ಹೇಳಿದೆ.
ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಅಮೆರಿಕ ಸರ್ಕಾರ ಸಮಗ್ರ ತನಿಖೆ ನಡೆಸಿ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.