ಚೆನ್ನೈ : ಕರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ನಿಷೇಧಿಸಲಾಗಿದೆ. ಆದರೆ, ಇದೇ ವೇಳೆ, ಗಣೇಶ ಮೂರ್ತಿ ತಯಾರಕರಿಗೆ 10 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ತಮಿಳುನಾಡಿನಲ್ಲಿ ಸಾರ್ವಜನಿಕ ಗಣೇಶೋತ್ಸವ ಇಲ್ಲ. ಗಣೇಶ ಮೂರ್ತಿ ತಯಾರಕರಿಗೆ 10 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ದೇಶಾದ್ಯಂತ ಸೆ.10 ರಂದು ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ತಮಿಳುನಾಡು ಸರ್ಕಾರ ವಿವಿಧ ನಿರ್ಬಂಧಗಳಿಗೆ ಆದೇಶಿಸಿದೆ. ಅದರಂತೆ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪೂಜಿಸಬಾರದು, ಜಲಸ್ಥಳಗಳಲ್ಲಿ ಗಣೇಶ ವಿಗ್ರಹಗಳನ್ನು ಮೆರವಣಿಗೆ ಮಾಡಿ ವಿಸರ್ಜಿಸಬಾರದು, ಮನೆಗಳಲ್ಲಿ ಮಾತ್ರ ಗಣೇಶ ಚತುರ್ಥಿ ಆಚರಿಸುವಂತೆ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ.