Thursday, 12th December 2024

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಗ್ಯಾಂಗ್ ರೇಪ್: ದರೋಡೆಕೋರರ ಬಂಧನ

ಲಖನೌ: ಉತ್ತರಪ್ರದೇಶದ ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 8 ಮಂದಿ ದರೋಡೆಕೋರರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಮಹಾರಾಷ್ಟ್ರದ ಇಗಾಟಪುರಿಯಲ್ಲಿ ಮುಂಬೈ-ಪುಷ್ಪಕ್ ರೈಲು ಏರಿದ ಶಸ್ತ್ರಸಜ್ಜಿತ ದರೋಡೆಕೋರರು ಪ್ರಯಾಣಿಕರನ್ನು ಸುಲಿಗೆ ಮಾಡಿದ್ದು, ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಘಟನೆ ಸಂಬಂಧ ನಾಲ್ವ ರನ್ನು ಬಂಧಿಸಲಾಗಿದ್ದು, ಉಳಿದ ನಾಲ್ವರಿಗಾಗಿ ಶೋಧ ಕಾರ್ಯ ನಡೆದಿದೆ.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ದರೋಡೆಕೋರರು, ರಕ್ಷಣೆಗೆ ಬಂದ 5-6 ಪ್ರಯಾಣಿಕರಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಗಾಯ ಗೊಳಿಸಿದ್ದಾರೆ.

ರೈಲು ಮುಂಬೈನ ಕಸರಾ ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರು ಅಲರಾಂ ಬಾರಿಸಿದ್ದೂ ಅಲ್ಲದೇ ಜೋರಾಗಿ ಕಿರುಚಿಕೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ರೈಲ್ವೆಯ ರಕ್ಷಣಾ ಸಿಬ್ಬಂದಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ದರೋಡೆಕೋರರಿಂದ 34 ಸಾವಿರ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.