Sunday, 15th December 2024

ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಕುಸಿದು ಮಕ್ಕಳು ಸೇರಿ ಎಂಟು ಮಂದಿ ಸಾವು

ಗೋಂಡಾ: ಉತ್ತರ ಪ್ರದೇಶ ರಾಜ್ಯದ ಗೋಂಡಾ ಜಿಲ್ಲೆಯ ಟಿಕ್ರಿ ಗ್ರಾಮದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಂಡತಸ್ತಿನ ಮನೆ ಕುಸಿದು, ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ.

ಸ್ಫೋಟದ ರಭಸಕ್ಕೆ ಮನೆ ಕುಸಿದು ಬಿದ್ದು ಎಂಟು ಮಂದಿ ಮೃತಪಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿ ದ್ದು, ಅವರನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಮೃತಪಟ್ಟವರನ್ನು ನಿಸಾರ್ ಆಹಮದ್, ರುಬೀನಾ ಭಾನು, ಶಂಶದ್, ಸಾಯಿರುನ್ನೀಸಾ, ಶಹಬಾಜ್, ನೂರಿಸಾಬಾ, ಮೀರಜ್ ಮತ್ತು ಮಹಮದ್ ಶೋಹೆಬ್ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಹತ್ತುಗಂಟೆಗೆ ನೂರುಲ್ ಹಸನ್ ಎಂಬವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.