Thursday, 12th December 2024

ಅನಿಲ ಸೋರಿಕೆ: ಇಬ್ಬರ ಸಾವು, 15ಕ್ಕೂ ಹೆಚ್ಚು ಅಸ್ವಸ್ಥ

ಫುಲ್ಪುರ್(ಉತ್ತರ ಪ್ರದೇಶ): ಫುಲ್ಪುರ್ ನ ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆಯುಂಟಾಗಿ ಉಸಿರುಗಟ್ಟಿ ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದರು.

ಫುಲ್ ಪುರ್ ನಲ್ಲಿರುವ ಭಾರತೀಯ ರೈತ ರಸಗೊಬ್ಬರ ಸಹಕಾರಿ ಲಿಮಿಟೆಡ್(ಐಎಫ್‌ಎಫ್ ಸಿಒ) ನಲ್ಲಿ ಅನಿಲ ಸೋರಿಕೆಯಾಗಿ ಈ ದುರ್ಘಟನೆ ನಡೆದಿದ್ದು ಒಂದು ಘಟಕದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಸದ್ಯ ಅನಿಲ ಸೋರಿಕೆ ನಿಂತಿದೆ ಎಂದು ಪ್ರಯಾಗ್ ರಾಜ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಅಸ್ವಸ್ಥರಾಗಿರುವ ನೌಕರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಹ ಜಿಲ್ಲಾಧಿಕಾರಿ ತಿಳಿಸಿದ್ದಾರೆ.