Saturday, 14th December 2024

ಸಿಟಿ ಒನ್ ಫಸ್ಟ್ ಅವೆನ್ಯೂದಲ್ಲಿ ಬೆಂಕಿ ಅವಘಡ

ವದೆಹಲಿ: ಗ್ರೇಟರ್ ನೋಯ್ಡಾದ ಗೌರ್ ಸಿಟಿ ಒನ್ ಫಸ್ಟ್ ಅವೆನ್ಯೂದಲ್ಲಿರುವ ಗ್ಯಾಲಕ್ಸಿ ಪ್ಲಾಜಾದಲ್ಲಿ ಗುರುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಮಾಲ್ ನಲ್ಲಿ ಕಾಣಿಸಿಕೊಳ್ಳು ತ್ತಿದ್ದಂತೆ ಅದರಲ್ಲಿ ಸಿಲುಕಿದ್ದಂತ ಜನರು ಜೀವ ಉಳಿಸಿಕೊಳ್ಳಲು ಕೆಳಗೆ ಜಿಗಿದಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ರೇಟರ್ ನೋಯ್ಡಾದ ಗೌರ್ ಸಿಟಿ ಒನ್ ಫಸ್ಟ್ ಅವೆನ್ಯೂದಲ್ಲಿರುವ ಗ್ಯಾಲಕ್ಸಿ ಪ್ಲಾಜಾದಲ್ಲಿ ಗುರುವಾರ ಹೊತ್ತಿ ಉರಿದಿದೆ. ಪ್ಲಾಜಾದಲ್ಲಿ ಅನೇಕ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.

ಗ್ರೇಟರ್ ನೋಯ್ಡಾ ಪಶ್ಚಿಮದ ಗ್ಯಾಲಕ್ಸಿ ಪ್ಲಾಜಾದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಕೆಲವರು ತಮ್ಮ ಜೀವ ಉಳಿಸಲು ಮಾಲ್ ನ ಮೂರನೇ ಮಹಡಿಯಿಂದ ಜಿಗಿದಿದ್ದಾರೆ. ಕೆಲವು ಜನರು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.

ಮಾಹಿತಿಯ ಪ್ರಕಾರ, ಗ್ರೇಟರ್ ನೋಯ್ಡಾ ಪಶ್ಚಿಮದ ಬಿಸ್ರಾಖ್ ಪೊಲೀಸ್ ಠಾಣೆ ಪ್ರದೇಶದ ಗೌರ್ ಸಿಟಿ ಒನ್ ಫಸ್ಟ್ ಅವೆನ್ಯೂದಲ್ಲಿರುವ ಗ್ಯಾಲಕ್ಸಿ ಪ್ಲಾಜಾದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಜಾದಲ್ಲಿ ಅನೇಕ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.