Friday, 22nd November 2024

ಮಾನನಷ್ಟ ಮೊಕದ್ದಮೆ ಹೂಡಿದ ಗೌತಮ್ ಗಂಭೀರ್

ನವದೆಹಲಿ: ಹಿಂದಿ ದೈನಿಕ ಪಂಜಾಬ್ ಕೇಸರಿ ವಿರುದ್ಧ ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು 2 ಕೋಟಿ ರೂಪಾಯಿ ನಷ್ಟ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ತಮ್ಮನ್ನು ‘ಪುರಾಣದಲ್ಲಿನ ರಾಕ್ಷಸ ಪಾತ್ರವಾಗಿರುವ ಭಸ್ಮಾಸುರನಿಗೆ ಹೋಲಿಸಲಾಗಿದೆ’ ಎಂದು ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಅವರ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಗಂಭೀರ್ ಅವರು ಪಂಜಾಬ್​ ಕೇಸರಿ ಪತ್ರಿಕೆ ಸಂಪಾದಕ ಆದಿತ್ಯ ಚೋಪ್ರಾ ಮತ್ತು ವರದಿ ಗಾರ ಅಮಿತ್ ಕುಮಾರ್ ಮತ್ತು ಇಮ್ರಾನ್ ಖಾನ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. “ತಮ್ಮನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ದುರುದ್ದೇಶಪೂರಿತ ಮತ್ತು ಮಾನಹಾ ನಿಕರ ಲೇಖನಗಳ ಸರಣಿ ಪ್ರಕಟಿಸಿರುವ ಈ ಮೂವರು ತಮ್ಮ ಪತ್ರಿಕೋದ್ಯಮ ಸ್ವಾತಂತ್ರ್ಯ ವನ್ನು ದುರುಪಯೋಗ ಮಾಡಿಕೊಂಡಿದ್ದಾರೆ” ಎಂದು ದೂರಿದ್ದಾರೆ.

ವಕೀಲ ಜೈ ಅನಂತ್ ದೇಹದ್ರಾಯ್ ಅವರ ಮೂಲಕ ಗಂಭೀರ್ ಮೊಕದ್ದಮೆ ಹೂಡಿದ್ದಾರೆ. ಪತ್ರಿಕೆಯು ತನ್ನ ಕಥೆಗಳಿಗೆ ಅನಗತ್ಯ ತಿರುವು ನೀಡಿದೆ ಎಂದು ಉಲ್ಲೇಖಿಸಿದ್ದಾರೆ. ಪೂರಕವಾಗಿ ಹಲವಾರು ವರದಿಗಳನ್ನು ಸಾಕ್ಷ್ಯವಾಗಿ ಉಲ್ಲೇಖಿಸಿದ್ದಾರೆ.