Thursday, 12th December 2024

ರಾಜ್ಯಸಭಾ ಸದಸ್ಯತ್ವಕ್ಕೆ ತಾವರ್‌ಚಂದ್‌ ಗೆಹ್ಲೋಟ್‌ ರಾಜೀನಾಮೆ

ನವದೆಹಲಿ: ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿರುವ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ಮಾಜಿ ಸಚಿವ ತಾವರ್‌ಚಂದ್‌ ಗೆಹ್ಲೋಟ್‌ ಅವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮೇಲ್ಮನೆಯ ಅಧ್ಯಕ್ಷರೂ ಆಗಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದ ಗೆಹ್ಲೋಟ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿಸಲಾಗಿದೆ.

ಮಂಗಳವಾರ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಕ ಮಾಡಲಾಗಿತ್ತು. ಗೆಹ್ಲೋಟ್ ರಾಜ್ಯಸಭಾ ಸದಸ್ಯರು ಸಹ ಆಗಿದ್ದರು.