Sunday, 21st April 2024

ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

ತಿರುಪತಿ : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಮನವಮಿ ವಿಶೇಷ ದಿನದಂದು ಭೇಟಿ ನೀಡಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯಪಾಲರಾದ ನಂತರ ಎರಡನೇ ಬಾರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು, ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ ಹೆಸರು ಪಸರಿಸಲೆಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಪೂಜೆಯ ನಂತರ ರಂಗಾ ನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರ ನೀಡಿ ರಾಜ್ಯಪಾಲರನ್ನು ಗೌರವಿಸಿದರು. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ರಾಜ್ಯಪಾಲ ರಿಗೆ ದೇವಾಲಯದ ವತಿಯಿಂದ ನೀಡಲಾಯಿತು.

error: Content is protected !!