Friday, 22nd November 2024

ರೈತರ ಧರಣಿಗೆ ಎರಡು ವಾರಗಳಲ್ಲಿ ಪರಿಹಾರ ಕಂಡುಕೊಳ್ಳಿ: ಸುಪ್ರೀಂ ಕೋರ್ಟ್‌

ನವದೆಹಲಿ : ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಆದ್ರೆ, ರಸ್ತೆಗಳಲ್ಲಿ ಸಂಚಾರ ನಿಲ್ಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಎರಡು ವಾರಗಳಲ್ಲಿ ಪರಿಹಾರ ಕಂಡುಕೊಳ್ಳುವಂತೆ ನ್ಯಾಯಾಲಯವು ಕೇಂದ್ರ ಮತ್ತು ಯುಪಿ ಸರ್ಕಾರಕ್ಕೆ ಸೂಚಿಸಿದೆ.

ರೈತರ ಧರಣಿಯಿಂದಾಗಿ ದೆಹಲಿ-ಯುಪಿ ಗಡಿಯಲ್ಲಿ ರಸ್ತೆ ಬಂದ್ ಮಾಡುವ ವಿರುದ್ಧದ ಅರ್ಜಿಯ ಕುರಿತು ಸೋಮವಾರ ಮಹತ್ವದ ವಿಚಾರಣೆ ನಡೆಯಿತು.

ಕೋರ್ಟ್ ಮತ್ತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಪ್ರಶ್ನೆಗಳನ್ನ ಎತ್ತಿದ್ದು, ರಸ್ತೆಯ ಸಂಚಾರ ಈ ರೀತಿ ನಿಲ್ಲಿಸಲು ಸಾಧ್ಯವಿಲ್ಲ. ಸರ್ಕಾರ ಪರಿಹಾರವನ್ನ ಕಂಡುಕೊಳ್ಳಬೇಕು. ಸಾಮಾನ್ಯ ಜನರಿಗೆ ತೊಂದರೆ ಯಾಗದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನಿಮಗೆ ಸಾಕಷ್ಟು ಸಮಯ ಸಿಕ್ಕಿದೆ, ಈಗ ಏನಾದರೂ ಮಾಡಿ ಎಂದಿದೆ. ಇನ್ನು ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 20 ರಂದು ನಡೆಸಲಿದೆ.

ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ನಡೆದ ಪ್ರದರ್ಶನಕ್ಕೆ ಸಂಬಂಧಿಸಿದಂತೆ, ಇತರರ ಜೀವನಕ್ಕೆ ಅಡ್ಡಿಪಡಿಸಬೇಡಿ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಜನರು ಪ್ರತಿಭಟಿಸುವ ಹಕ್ಕನ್ನು ಹೊಂದಿದ್ದಾರೆ, ಆದರೆ ಇತರರನ್ನು ತಡೆಯಲು ಸಾಧ್ಯವಿಲ್ಲ.

ಈ ವಿಷಯದಲ್ಲಿ, ಕೇಂದ್ರ ಸರ್ಕಾರವು ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ ಮತ್ತು ಎರಡು ವಾರಗಳ ಕಾಲಾವಕಾಶಬೇಕು ಎಂದು ಹೇಳಿದೆ.