Sunday, 15th December 2024

ಜಮ್ಮು ಮತ್ತು ಕಾಶ್ಮೀರ: ಆಜಾದ್ ಮುಖ್ಯಮಂತ್ರಿ ಅಭ್ಯರ್ಥಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೆಸರು ಪ್ರಸ್ತಾಪಿಸಲು ಕಾಂಗ್ರೆಸ್ ತಾತ್ವಿಕವಾಗಿ ಒಪ್ಪಿಗೆ ನೀಡಿದೆ.

ಆಜಾದ್ ಅವರನ್ನು ಪಕ್ಷದ ಮುಖ್ಯಮಂತ್ರಿಯಾಗಿ ಹೆಸರಿಸಬೇಕೆಂಬ ಜಮ್ಮು ಕಾಶ್ಮೀರ ನಾಯಕರ ಬೇಡಿಕೆಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ ಮೊದಲ ಅಸೆಂಬ್ಲಿ ಚುನಾವಣೆ ಈ ವರ್ಷದ ಅಂತ್ಯದ ವೇಳೆಗೆ ನಡೆಯಲಿದೆ.

ಮುಂದಿನ ಕೆಲವೇ ದಿನಗಳಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಈ ಸಂಬಂಧ ಅಧಿಕೃತ ಘೋಷಣೆ ಮಾಡಲಿದ್ದಾರೆ

ಪಕ್ಷದಲ್ಲಿ ಆಜಾದ್ ಅವರಂತ ಮತ್ತೊಬ್ಬ ನಾಯಕರಿಲ್ಲ. ಜಮ್ಮು ಕಾಶ್ಮೀರದಲ್ಲಿ ಪ್ರಭಾವಿ ನಾಯಕರಾಗಿದ್ದು, ಸಮಾಜದ ಎಲ್ಲಾ ವರ್ಗಗಳಿಗೆ ಸ್ವೀಕಾರಾರ್ಹರಾಗಿದ್ದಾರೆ. ಆಜಾದ್ ಅವರು ಜಮ್ಮು-ಕಾಶ್ಮೀರ ಸಿಎಂ ಆಗಿದ್ದ ಅವಧಿಯಲ್ಲಿ ನೀಡಿದ್ದ ಉತ್ತಮ ಆಡಳಿತ ವನ್ನು ಜನರು ಇನ್ನೂ ನೆನಪಿಸಿಕೊಳ್ಳುತ್ತಾರೆ . ಆಜಾದ್ ಅವರು ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಜಿಎ ಮಿರ್ ರಾಜೀನಾಮೆ ನೀಡಿದ ನಂತರ ಆ ಸ್ಥಾನ ತೆರವಾದ ಕಾರಣ ಕಾಂಗ್ರೆಸ್ ಹಿರಿಯ ನಾಯಕ ಆಜಾದ್ ಅವರನ್ನು ನೂತನ ಜೆಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಿದೆ ಎಂದು ಮೂಲಗಳು ತಿಳಿಸಿವೆ.