Sunday, 8th September 2024

ಗೋವಾ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗೆ ಹಿನ್ನಡೆ

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿ ದ್ದರೂ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಮತ್ತು ಉಪ ಮುಖ್ಯಮಂತ್ರಿ ಚಂದ್ರಶೇಖರ್ ಕಾವ್ಲೇಕರ್‌ ಅವರಿಗೆ ಹಿನ್ನಡೆಯಾಗಿದೆ.

ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧರ್ಮೇಶ್ ಸಲ್ಗಾನಿ ಎದುರಿಗೆ ಸಾವಂತ್ ಅವರಿಗೆ 436 ಮತಗಳ ಹಿನ್ನಡೆಯಾಗಿದೆ.

ಕ್ವಿಪೆಮ್ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾವ್ಲೇಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಆಲ್ಟೋನ್ ಡಿ’ಕೋಸ್ಟಾ ಎದುರು 1,422 ಮತಗಳ ಹಿನ್ನಡೆ ಅನುಭವಿಸಿದ್ದಾರೆ.

 

ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್‌ ಅವರ ಪುತ್ರ ಉತ್ಪಲ್ ಪರಿಕ್ಕರ್ ಕೂಡ ಬಿಜೆಪಿ ಅಭ್ಯರ್ಥಿ ಅಟಾನಾಸಿಯೊ ಮೊನಸೆರೆಟ ಎದುರು ಹಿನ್ನಡೆ ಅನುಭವಿಸಿದ್ದಾರೆ.

error: Content is protected !!