ಪಣಜಿ: ಗೋವಾ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮೋದ್ ಸಾವಂತ್ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ಶ್ಯಾಮ್‌ಪ್ರಸಾದ್ ಮುಖರ್ಜಿ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭ ದಲ್ಲಿ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರು ಸಾವಂತ್‌ಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಇತರ ಬಿಜೆಪಿ ನಾಯಕರು ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿ ಯಾದರು. ಸ್ಥಳದಲ್ಲಿ 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸ ಲಾಗಿತ್ತು.
40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರುವರಿ 14ರಂದು ನಡೆದಿದ್ದ ಚುನಾವಣೆ ಯಲ್ಲಿ ಬಿಜೆಪಿ 20 ಸ್ಥಾನ ಗಳಿಸಿತ್ತು. ಮೂವರು ಸ್ವತಂತ್ರ ಅಭ್ಯರ್ಥಿಗಳು ಮತ್ತು ಮಹಾ ರಾಷ್ಟ್ರವಾದಿ ಗೋಮಂತಕ್ ಪಕ್ಷದ ಇಬ್ಬರು ಶಾಸಕರ ಬೆಂಬಲವನ್ನೂ ಬಿಜೆಪಿ ಹೊಂದಿದೆ.
2017ರಲ್ಲಿ ಪರಿಕ್ಕರ್ ಅವರ ಸರ್ಕಾರದಲ್ಲಿ ಸಾವಂತ್ ಅವರು ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು. ಪರಿಕ್ಕರ್ ಅವರ ನಿಧನದ ಬಳಿಕ ಮುಖ್ಯಮಂತ್ರಿಯಾಗಿ ನೇಮಕ ಗೊಂಡಿದ್ದರು.