Saturday, 14th December 2024

ಮೇ 31ರವರೆಗೆ ಲಾಕ್‌ಡೌನ್: ಗೋವಾ ಸರ್ಕಾರ

ಪಣಜಿ: ದಿನೇ ದಿನೇ ಕರೋನಾ ಸೋಂಕು ಹೆಚ್ಚಾಗುತ್ತಿದ್ದು, ಮೇ 31ರವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿ ಗೋವಾ ಸರ್ಕಾರ ಆದೇಶ ಹೊರಡಿಸಿದೆ.

ಶುಕ್ರವಾರ ಸಂಪುಟ ಸಭೆಯ ಬಳಿಕ ಮಾತನಾಡಿ, ರಾಜ್ಯದಲ್ಲಿ ಮೇ 31ರವರೆಗೆ ಲಾಕ್‌ಡೌನ್ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ, ಕಠಿಣ ನಿಯಮಗಳು ಮೊದಲಿನಂತೆಯೇ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಗೋವಾದಲ್ಲಿ ಗುರುವಾರ 1582 ಸೋಂಕಿತರು ಪತ್ತೆಯಾಗಿದ್ದಾರೆ. ಸೋಂಕಿತರ ಸಂಖ್ಯೆ 1,47,567ಕ್ಕೆ ಏರಿಕೆ ಯಾಗಿದೆ. ಈವರೆಗೆ 2272 ಮಂದಿ ಮೃತಪಟ್ಟಿದ್ದಾರೆ. ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಮೇ 3 ರಿಂದ ಮೇ 23ರವರೆಗೆ ಲಾಕ್‌ಡೌನ್ ಘೋಷಣೆ ಮಾಡಲಾಗಿತ್ತು.