ಪಣಜಿ: ಗೋವಾದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಲಾಕ್ಡೌನ್ ಘೋಷಿಸಿ ಆದೇಶ ಹೊರಡಿಸಲಾಗಿದೆ. ಕರ್ನಾಟಕದಲ್ಲಿ ಲಾಕ್ಡೌನ್ ಜಾರಿ ಯಾದ ಬೆನ್ನಲ್ಲೇ ಇದೀಗ ನೆರೆ ರಾಜ್ಯ ಗೋವಾದಲ್ಲೂ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಏ.29ರ ಸಂಜೆ 7 ಗಂಟೆಯಿಂದ ಮೇ 3ರ ಬೆಳಗ್ಗೆಯವರೆಗೂ ಲಾಕ್ಡೌನ್ ಜಾರಿಯಲ್ಲಿರಲಿದೆ. ಈ ಸಮಯದಲ್ಲಿ ಅಗತ್ಯ ಸಾಮಾಗ್ರಿ ಅಂಗಡಿಗಳು ಹಾಗೂ ಕೈಗಾರಿಕೆಗಳು ಕೆಲಸ ನಿರ್ವಹಿಸಬಹುದು. ವೈದ್ಯಕೀಯ ವಲಯ ಎಂದಿನಂತೆ ಕೆಲಸ ಮಾಡಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
ಸರಕು ವಾಹನಗಳಿಗೆ ಅಂತರರಾಜ್ಯ ಸಂಚಾರಕ್ಕೆ ಅವಕಾಶವಿದೆ. ಉಳಿದಂತೆ ಸಾರಿಗೆ ವ್ಯವಸ್ಥೆಯನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಲಾಗಿದೆ. ಗೋವಾದಲ್ಲಿ ಮಂಗಳವಾರ 2,110 ಕರೋನಾ ಪ್ರಕರಣಗಳು ಕಾಣಿಸಿಕೊಂಡಿವೆ. ಒಂದೇ ದಿನದಲ್ಲಿ 31 ಮಂದಿ ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ.