Thursday, 6th June 2024

ಆ.22 ರಂದು ಗೋವಾಕ್ಕೆ ರಾಷ್ಟ್ರಪತಿ ಮುರ್ಮು ಆಗಮನ

ಣಜಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ಆ. 22 ರಂದು ಗೋವಾಕ್ಕೆ ಆಗಮಿಸಲಿದ್ದಾರೆ.

ದ್ರೌಪದಿ ಮುರ್ಮು ರವರು ಭಾರತದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಗೋವಾದ ಮೊದಲ ಭೇಟಿ ಇದಾಗಿದೆ. ಮೂರು ದಿನಗಳ ಭೇಟಿಯಲ್ಲಿ ರಾಷ್ಟ್ರಪತಿಗಳು ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರಪತಿ ಅವರು ಮುಂದಿನ ವಾರ ಆಗಸ್ಟ್ 22 ರಿಂದ 24 ರವರೆಗೆ ಮೂರು ದಿನಗಳ ಭೇಟಿಗಾಗಿ ಗೋವಾಕ್ಕೆ ಆಗಮಿಸಲಿದ್ದಾರೆ.

ಆ. 23ರ ಮಂಗಳವಾರ ಗೋವಾ ವಿಶ್ವವಿದ್ಯಾನಿಲಯದ ಪದವಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ, ಸಂಜೆ 4 ಗಂಟೆಗೆ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಶಾಸಕ ರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಳೆದ ವರ್ಷ ರಾಷ್ಟ್ರಪತಿ ಚುನಾವಣೆಗೂ ಮುನ್ನ ದ್ರೌಪದಿ ಮುರ್ಮು ರವರು ಗೋವಾಕ್ಕೆ ಭೇಟಿ ನೀಡಿದ್ದರು.

ರಾಷ್ಟ್ರಪತಿ ಗೋವಾಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಗಳು, ಎಲ್ಲ ಇಲಾಖೆಗಳ ಮುಖ್ಯಸ್ಥರು, ಆಡಳಿತದ ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯದರ್ಶಿಗಳ ರಜೆ ರದ್ದುಗೊಳಿಸಲಾಗಿದೆ. ಸಿಬ್ಬಂದಿ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆ.24ರವರೆಗೆ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!