Sunday, 15th December 2024

ನಿವೃತ್ತ ಜಡ್ಜ್‌ ನೇತೃತ್ವದ ಸಮಿತಿಗೆ ಗೋಕರ್ಣ ದೇಗುಲ ನಿರ್ವಹಣೆ ಹೊಣೆ

ನವದೆಹಲಿ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿಗೆ ಧಾರ್ಮಿಕ ಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆ ಹೊಣೆಯನ್ನು ಸುಪ್ರೀಂಕೋರ್ಟ್ ವಹಿಸಿ ಆದೇಶ ನೀಡಿದೆ.

ದೇವಸ್ಥಾನದ ನಿರ್ವಹಣೆ ಹೊಣೆಯನ್ನು ರಾಮಚಂದ್ರಾಪುರ ಮಠಕ್ಕೆ ವಹಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಿ 2018ರಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗೆ ಸುಪ್ರೀಂ ಕೋರ್ಟ್ ಈ ಮಧ್ಯಂತರ ಆದೇಶ ಹೊರಡಿಸಿರುವುದಾಗಿ ತಿಳಿಸಿದೆ.

ಸುಪ್ರೀಂಕೋರ್ಟ್ ಸಿಜೆಐ ಬೋಬ್ಡೆ, ಜಸ್ಟೀಸ್ ಬೋಪಣ್ಣ ಮತ್ತು ಜಸ್ಟೀಸ್ ರಾಮಸುಬ್ರಮಣಿಯನ್ ನೇತೃತ್ವದ ತ್ರಿಸದಸ್ಯ ಪೀಠ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ, ದೇವಸ್ಥಾನದ ಎಲ್ಲಾ ಪೂಜಾ, ವಿಧಿವಿಧಾನಗಳು ಜಸ್ಟೀಸ್ ಬಿಎನ್ ಶ್ರೀಕೃಷ್ಣ ನೇತೃತ್ವದ ಸಮಿತಿಯ ಮೇಲ್ವಿಚಾರಣೆಯಲ್ಲಿ ನಡೆಯಲಿದೆ ಎಂದು ತಿಳಿಸಿದೆ.