Friday, 13th December 2024

ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ: 400 ರೂಪಾಯಿ ಏರಿಕೆ

ನವದೆಹಲಿ: ಭಾರತದಲ್ಲಿ ಸ್ಥಿರವಾಗಿದ್ದ ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದೆ.

ಮಂಗಳವಾರ 10 ಗ್ರಾಂ ಚಿನ್ನದ ಬೆಲೆಯಲ್ಲಿ ಹಾಗೂ ಒಂದು ಕೆಜಿ ಬೆಳ್ಳಿ ದರದಲ್ಲಿ 400 ರೂಪಾಯಿ ಏರಿಕೆ ಕಂಡಿದೆ.

ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 49,000 ರೂಪಾಯಿ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 53,450 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರವು 68,100 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,450 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,450 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,450 ರೂ. ಇದೆ. ಚೆನ್ನೈನಲ್ಲಿ 49,560 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 54,060 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,450 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.