Sunday, 15th December 2024

10 ಗ್ರಾಂ ಚಿನ್ನದ ಬೆಲೆಯಲ್ಲಿ ಏಕಾಏಕಿ ಏರಿಕೆ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ಘೋಷಣೆ ಮಾಡಿದ್ದು, ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ.

ಇದೀಗ 10 ಗ್ರಾಂ ಚಿನ್ನದ ಬೆಲೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು, 1,400 ರೂಪಾಯಿಯಷ್ಟು ಹೆಚ್ಚಳ ಕಂಡಿದೆ. ವರ್ಷದಲ್ಲೇ ಅತ್ಯಧಿಕ ಏರಿಕೆಯಾಗಿದೆ. ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನ 1,400ರೂಪಾಯಿ ಹೆಚ್ಚಳ ಕಂಡಿದ್ದು, 51,750 ಗರಿಷ್ಠ ಮಟ್ಟ ದಾಖಲಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 1925 ಡಾಲರ್ ನಷ್ಟಿದ್ದ ಚಿನ್ನವು 1950 ಡಾಲರ್ ತಲುಪಿದೆ. ಚಿನ್ನದ ಬೆಲೆ ಇನ್ನೂ ಏರಿಕೆಯಾಗುವ ಸಂಭವ ಇದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಂದಾಜಿಸಿದ್ದಾರೆ.