ಬೆಂಗಳೂರು: ನಿನ್ನೆ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರ (Gold Price Today) ಇಂದು ಮತ್ತೆ ಏರಿಕೆಯಾಗಿದೆ. 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 40 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 43 ರೂ. ಅಧಿಕವಾಗಿದೆ. ಶುಕ್ರವಾರ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,100 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 7,745 ರೂ.ಗೆ ಇದೆ.
22 ಕ್ಯಾರಟ್ ಚಿನ್ನದ ದರಗಳ ವಿವರ
22 ಕ್ಯಾರಟ್‌ನ 8 ಗ್ರಾಂ ಚಿನ್ನ 56,800 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,000 ರೂ. ಮತ್ತು 100 ಗ್ರಾಂಗೆ 7,10,000 ರೂ. ಪಾವತಿಸಬೇಕಾಗುತ್ತದೆ.
24 ಕ್ಯಾರಟ್ ಚಿನ್ನದ ದರಗಳ ವಿವರ
24 ಕ್ಯಾರಟ್‌ನ 8 ಗ್ರಾಂ ಚಿನ್ನ 61,960 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,450 ರೂ. ಮತ್ತು 100 ಗ್ರಾಂಗೆ 7,74,500 ರೂ. ಪಾವತಿಸಬೇಕಾಗುತ್ತದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
ಬೆಂಗಳೂರು | 7,100 ರೂ. | 7,745 ರೂ. |
ದೆಹಲಿ | 7,115 ರೂ. | 7,760 ರೂ. |
ಮುಂಬೈ | 7,100 ರೂ. | 7,745 ರೂ. |
ಚೆನ್ನೈ | 7,100 ರೂ. | 7,745 ರೂ. |
ಹೈದರಾಬಾದ್ | 7,100 ರೂ. | 7,745 ರೂ. |
ಬೆಳ್ಳಿ ಬೆಲೆ
ಇತ್ತ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಬೆಳ್ಳಿ 1 ಗ್ರಾಂಗೆ 90 ರೂ. ಇದೆ. 8 ಗ್ರಾಂಗೆ 720 ರೂ., 10 ಗ್ರಾಂಗೆ 900 ರೂ. ಮತ್ತು 1 ಕೆಜಿಗೆ 90,000 ರೂ. ಪಾವತಿಸಬೇಕಾಗುತ್ತದೆ.
ಚಿನ್ನಾಭರಣ ಖರೀದಿಸುವ ಮುನ್ನ ಗಮನಿಸಬೇಕಾದ ಅಂಶ
ಶುದ್ಧತೆ: ಚಿನ್ನಾಭರಣ ಖರೀದಿಸುವ ಮುನ್ನ ಅದರ ಶುದ್ಧತೆಯನ್ನು ಪರಿಶೀಲಿಸುವುದು ಅಗತ್ಯ. ಚಿನ್ನದ ಮೇಲೆ ಶುದ್ಧತೆಯನ್ನು ಸೂಚಿಸುವ ಬಿಐಎಸ್ (BIS) ಹಾಲ್‌ಮಾರ್ಕ್ ಇದೆ ಎನ್ನುವುದನ್ನು ಖಚಿತಪಡಿಸಿ. ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂಬುದನ್ನು ಆ ಮೂಲಕ ಪ್ರಮಾಣೀಕರಿಸಬಹುದು.
ಬೆಲೆ: ಚಿನ್ನದ ಬೆಲೆ ಪ್ರತಿ ದಿನ ಬದಲಾಗುತ್ತಿರುತ್ತದೆ. ಖರೀದಿಸುವ ಮುನ್ನ ಬೆಲೆ ಎಷ್ಟಿದೆ ಎನ್ನುವುದನ್ನು ಗಮನಿಸಿ. ಇದಕ್ಕಾಗಿ ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಪರಿಶೀಲಿಸುವುದನ್ನು ಮರೆಯಬೇಡಿ.
ಹೋಲಿಕೆ ಮಾಡಿ: ಮತ್ತೊಂದು ಮುಖ್ಯ ವಿಚಾರ ಎಂದರೆ ಬೆಲೆಗಳ ಹೋಲಿಕೆ. ಬೇರೆ ಬೇರೆ ಜ್ಯುವೆಲ್ಲರಿಗಳಲ್ಲಿ ವ್ಯತ್ಯಸ್ತ ಬೆಲೆಗಳಿರುತ್ತವೆ. ನೀವು ಚಿನ್ನ ಖರೀದಿಸುವ ಮುನ್ನ ಬೆಲೆಗಳನ್ನು ಹೋಲಿಸಿ ನೋಡಿ. ಇದರಿಂದ ನಿಮಗೆ ಸಾಕಷ್ಟು ಹಣ ಉಳಿತಾಯು ಮಾಡಬಹುದಾಗಿದೆ.
ಮೇಕಿಂಗ್ ಚಾರ್ಜಸ್: ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ (Making Charges) ಮತ್ತು ವೇಸ್ಟೇಜ್ ಚಾರ್ಜ್ (Wastage Charges) ಎಂದಿರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲ ಆಭರಣಗಳಿಗೆ ಮೇಕಿಂಗ್, ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ.
ವಿನ್ಯಾಸ: ಮೊದಲೇ ಹೇಳಿದಂತೆ ಆಭರಣಗಳ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುತ್ತದೆ. ಸೂಕ್ಷ್ಮ ಕೆತ್ತನೆಯ, ಕೈಯಿಂದ ತಯಾರಿಸುವ ಆಭರಣ ಸ್ವಲ್ಪ ದುಬಾರಿಯಾಗಿತ್ತವೆ. ಆದ್ದರಿಂದ ಈ ಬಗ್ಗೆಯೂ ಗಮನ ಹರಿಸಿ.
ಈ ಸುದ್ದಿಯನ್ನೂ ಓದಿ: ESAF: ವಾಣಿಜ್ಯ ವಾಹನ ಹಣಕಾಸು ಸೌಲಭ್ಯ ಒದಗಿಸಲು ಇಎಸ್ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದ ಟಾಟಾ ಮೋಟಾರ್ಸ್