Sunday, 19th May 2024

ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ

ನವದೆಹಲಿ: ಚಿನ್ನ-ಬೆಳ್ಳಿ ಖರೀದಿ ದರದಲ್ಲಿ ಏರಿಳಿತ ಮುಂದುವರಿದಿದೆ. ಬುಧವಾರ 450 ರೂಪಾಯಿ ಇಳಿಮುಖ ವಾಗಿದ್ದ ಚಿನ್ನದ ಬೆಲೆ ಗುರುವಾರ 200 ರೂಪಾಯಿ ಏರಿಕೆ ಕಂಡಿದೆ.

22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 46,300 ರೂಪಾಯಿ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 50,510 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲಿ ಬರೋಬ್ಬರಿ 4100 ರೂಪಾಯಿ ಏರಿಕೆಯಾಗಿದ್ದು, ಒಂದು ಕೆಜಿಗೆ 65,100 ರೂಪಾಯಿ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,300 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,510 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,300 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,510 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,300 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,510 ರೂ. ಇದೆ. ಚೆನ್ನೈನಲ್ಲಿ 47,280 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 51,580 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,300 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,510 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮ ದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರಕ್ಕಿಂತ ಹೆಚ್ಚಾಗಿದೆ.

error: Content is protected !!