Sunday, 2nd June 2024

ಚಿನ್ನದ ದರ 100 ರೂ., ಬೆಳ್ಳಿ ದರ 400 ರೂ. ಏರಿಕೆ

ನವದೆಹಲಿ: ಭಾರತದಲ್ಲಿ ಚಿನ್ನ-ಬೆಳ್ಳಿ ಬೆಲೆಯಲ್ಲಿನ ಏರಿಳಿತ ಮುಂದುವರಿದಿದೆ.

ಭಾನುವಾರ ಸ್ಥಿರತೆ ಕಾಯ್ದುಗೊಂಡಿದ್ದ ಚಿನ್ನದ ಬೆಲೆಯು ಸೋಮವಾರ 100 ರೂಪಾಯಿ ಏರಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 47,150 ರೂಪಾಯಿ ಆಗಿದೆ.

24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 51,430 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲೂ 400 ರೂಪಾಯಿ ಏರಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಗೆ 61,800 ರೂಪಾಯಿ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,430 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,430 ರೂ. ಇದೆ.

ಇನ್ನು ದೆಹಲಿ ಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,430 ರೂ. ಇದೆ. ಚೆನ್ನೈನಲ್ಲಿ 48,310 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,700 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,430 ರೂ ಇದೆ.

error: Content is protected !!