Thursday, 12th December 2024

ಬೆಂಗಳೂರಿಗೆ ಮತ್ತೆರಡು ಮೆಟ್ರೋ ಹೊಸ ಮಾರ್ಗ

ನವದೆಹಲಿ : ಬಜೆಟ್ ನಲ್ಲಿ ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಗುಡ್ ನ್ಯೂಸ್. ಬೆಂಗಳೂರಿಗೆ ಮತ್ತೆರಡು ಮೆಟ್ರೋ ಹೊಸ ಮಾರ್ಗ ಗಳಿಗೆ ಕೇಂದ್ರ ಸರ್ಕಾರ ಅನುದಾನ ಘೋಷಿಸುವ ಮೂಲಕ, ಹೊಸ ಮೆಟ್ರೋ ಮಾರ್ಗಗಳಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಇರುವ ಮಾರ್ಗಗಳ ಜೊತೆಗೆ ಮತ್ತೆರಳು ಮೆಟ್ರೋ ಮಾರ್ಗಗಳು ಬರಲಿವೆ.

ಬಜೆಟ್ ಮಂಡನೆ ವೇಳೆ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 2ಎ ಮತ್ತು 2ಬಿ ಹಂತದಲ್ಲಿ ಎರಡು ಮೆಟ್ರೋ ಮಾರ್ಗಗಳನ್ನು ಹೊಸದಾಗಿ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ 58.19 ಕಿಲೋಮೀಟರ್ ಮೆಟ್ರೋ ಮಾರ್ಗದಲ್ಲಿ ಹೊಸ ಮೆಟ್ರೋ ಸಂಚಾರ ಆರಂಭಕ್ಕೆ ಅನುದಾನವಾಗಿ 14 ಸಾವಿರ ಕೋಟಿ ಮೀಸಲಿಡಲಾಗುತ್ತಿದೆ ಎಂದು ಘೋಷಿಸಿದರು.