Wednesday, 8th January 2025

Gopal Italia: ಆಪ್‌ ನಾಯಕನ ಹೈಡ್ರಾಮಾ! ಬೆಲ್ಟ್‌ನಿಂದ ಹೊಡೆದುಕೊಂಡು ವಿನೂತನ ಪ್ರತಿಭಟನೆ

Gopal Italia

ಗಾಂಧಿನಗರ: ಗುಜರಾತ್‌ನ (Gujarat) ಸೂರತ್‌ನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಹೈಡ್ರಾಮಾ ನಡೆದಿದ್ದು, ಆಮ್ ಆದ್ಮಿ ಪಕ್ಷದ (AAP) ನಾಯಕ ಗೋಪಾಲ್ ಇಟಾಲಿಯಾ (Gopal Italia) ಅವರು ಬಿಜೆಪಿ ಆಡಳಿತದ ರಾಜ್ಯದಲ್ಲಿ ಜನರಿಗೆ ಸರಿಯಾಗಿ ನ್ಯಾಯ ಸಿಗುತ್ತಿಲ್ಲ. ಸರ್ಕಾರ ಸಂತ್ರಸ್ತರಿಗೆ ನ್ಯಾಯವನ್ನು ಒದಗಿಸಲು ವಿಫಲವಾಗಿದೆ ಎಂದು ಬೆಲ್ಟ್‌ನಿಂದ ಸ್ವ ಹೊಡೆದುಕೊಂಡಿದ್ದಾರೆ.

ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿರುವ ಮಹಿಳೆಯೊಬ್ಬರು , ಬಿಜೆಪಿ ನಾಯಕರೊಬ್ಬರ ಮಾನಹಾನಿ ಮಾಡಲು ಯತ್ನಿಸಿದ ಆರೋಪದ ಮೇಲೆ ಅಮ್ರೇಲಿಯಲ್ಲಿ ಆಕೆಯನ್ನು ಬಂಧಿಸಿದ್ದ ಘಟನೆಯನ್ನು ಉಲ್ಲೇಖಿಸಿದ ನಂತರ ತನ್ನ ಬೆಲ್ಟ್ ಅನ್ನು ಎಳೆದುಕೊಂಡು ತನ್ನನ್ನು ತಾನೇ ಹೊಡೆದುಕೊಂಡಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ ಅವರು ಮೋರ್ಬಿ ತೂಗುಸೇತುವೆ ಕುಸಿತ, ವಡೋದರಾ ದೋಣಿ ಮುಳುಗಿದ ಪ್ರಕರಣ, ಅಗ್ನಿ ಅವಘಡಗಳು ಮತ್ತು ಸರ್ಕಾರಿ ನೇಮಕಾತಿ ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣಗಳಂತಹ ಅನೇಕ ಘಟನೆಗಳಿಗೆ ಗುಜರಾತ್ ಸಾಕ್ಷಿಯಾಗಿದೆ, ಆದರೆ ಸಂತ್ರಸ್ತರಿಗೆ ನ್ಯಾಯವನ್ನು ಕೊಡಿಸಲು ನನಗೆ ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ.

ಎಎಪಿ ನಾಯಕರು ಅನೇಕ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಹೋರಾಡುತ್ತಿದ್ದಾರೆ ಮತ್ತು ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ನ್ಯಾಯಾಲಯಕ್ಕೆ ತೆರಳಿದ್ದಾರೆ, ಆದರೆ ಅದೆಲ್ಲ ವ್ಯರ್ಥವಾಯಿತು. ನಮಗೆ ಯಾರಿಗೂ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಸಾವಿರಾರು ಬಾರಿ ಜನರನ್ನು ಭೇಟಿ ಮಾಡಿದರೂ, ಅರ್ಜಿ ಸಲ್ಲಿಸಿದರೂ, ನ್ಯಾಯಾಲಯದ ಮೊರೆ ಹೋಗಿದ್ದರೂ ಗುಜರಾತ್‌ನ ಜನತೆಗೆ ನ್ಯಾಯ ಸಿಗುತ್ತಿಲ್ಲ. ಪ್ರತಿ ಘಟನೆಯ ನಂತರವೂ ಬಿಜೆಪಿ ನಾಯಕರು ಸಾರ್ವಜನಿಕರನ್ನು ಅಣಕಿಸುತ್ತಾರೆ.  ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ತಮಿಳುನಾಡಿನ  ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ (K Annamalai) ಅವರು ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯ (Anna University Case) ಖಂಡಿಸಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತಮ್ಮ ನಿವಾಸ ಎದುರು ಆರು ಬಾರಿ ಚಾಟಿಯಿಂದ ಮೈಮೇಲೆ ಹೊಡೆದುಕೊಂಡು ಪ್ರತಿಭಟಿಸಿದ್ದರು.

ಈ ಸುದ್ದಿಯನ್ನೂ ಓದಿ : Physical Assault: ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಅಣ್ಣಾ ವಿವಿಯಲ್ಲಿ ಇದೆಂಥಾ ಪೈಶಾಚಿಕ ಕೃತ್ಯ!

Leave a Reply

Your email address will not be published. Required fields are marked *