Monday, 25th November 2024

ಬಿಜೆಪಿ ಸ್ಪಷ್ಟ ಬಹುಮತದತ್ತ, ರಾಷ್ಟ್ರೀಯ ಪಕ್ಷವಾಗುವತ್ತ ಆಪ್‌

ಗಾಂಧಿನಗರ: ಗುಜರಾತ್‌ ವಿಧಾನಸಭೆ ಚುನಾವಣಾ ಫಲಿತಾಂಶ ಗುರುವಾರ ಪ್ರಕಟ ಗೊಳ್ಳುತ್ತಿದೆ. ಬಿಜೆಪಿ ಸ್ಪಷ್ಟ ಬಹುಮತದತ್ತ ಹೆಜ್ಜೆ ಇಟ್ಟಿದೆ. ಆದರೆ ಕಾಂಗ್ರೆಸ್‌ಗೆ ಮುಖ ಭಂಗವಾಗಿದೆ.

ಮೊದಲ ಬಾರಿ ಗುಜರಾತ್‌ನಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ ಆಮ್‌ ಆದ್ಮಿ ಪಕ್ಷಕ್ಕೆ ಒಂದಂಕಿಯ ಸ್ಥಾನಗಳು ಸಿಗುವುದು ನಿಶ್ಚಿತವಾಗಿದೆ. ದೆಹಲಿ ಹಾಗೂ ಪಂಜಾಬ್‌ ನಲ್ಲಿ ಸ್ಪಷ್ಟ ಬಹುಮತದಿಂದ ಅಧಿಕಾರ ಗದ್ದುಗೆ ಏರಿರುವ ಎಎಪಿ ರಾಷ್ಟ್ರೀಯ ಪಕ್ಷದ ಕನಸು ಕಾಣುತ್ತಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಹಾಗೂ ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಅವರು ಗುಜರಾತ್‌ನಲ್ಲಿ ಪ್ರಚಾರ ನಡೆಸಿದ್ದರು. ಪ್ರಧಾನಿ ಮೋದಿ ವರ್ಚಸ್ಸು ಹಾಗೂ ಹಿಂದುತ್ವದ ಆಸರೆ ಯನ್ನು ಬಿಜೆಪಿ ತೆಗೆದುಕೊಂಡಿತ್ತು. ಗುಜರಾತ್‌ನಲ್ಲಿ 40 ರಿಂದ 50 ಸ್ಥಾನಗಳನ್ನು ಗೆಲ್ಲುವು ದಾಗಿಯೂ ಎಎಪಿ ತಿಳಿಸಿತ್ತು. ಮಾಜಿ ಪತ್ರಕರ್ತ ಇಸುದಾನ್‌ ಗಧ್ವಿ ಅವರನ್ನು ಮುಖ್ಯ ಮಂತ್ರಿ ಅಭ್ಯರ್ಥಿ ಎಂದೂ ಎಎಪಿ ಘೋಷಿಸಿತ್ತು.

ಗುಜರಾತ್‌ನ ಮತಗಳು ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವನ್ನಾಗಿ ಮಾಡಲಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಎಎಪಿ ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಷ್ಟ್ರೀಯ ಪಕ್ಷವಾಗಲು, ಎಎಪಿ ಎರಡು ಸ್ಥಾನಗಳನ್ನು ಮತ್ತು ಶೇ 6 ಮತಗಳ ಪ್ರಮಾಣವನ್ನು ಹೊಂದಬೇಕು.