Thursday, 12th December 2024

ಗುಜರಾತ್‌ ಉಪ ಚುನಾವಣೆ: ಬಿಜೆಪಿ 7 ಕ್ಷೇತ್ರಗಳಲ್ಲಿ ಮುನ್ನಡೆ

ಗಾಂಧಿನಗರ: ಗುಜರಾತ್‌ನಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಬಿಜೆಪಿ 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಬಿಜೆಪಿಯು ಶೇ.53.13ರಷ್ಟು ಮತ ಪಡೆದಿದೆ.

ಭಾರತೀಯ ನ್ಯಾಷನಲ್ ಕಾಂಗ್ರೆಸ್ ಶೇ.35.1ರಷ್ಟು ವೋಟ್ ಶೇರ್ ಪಡೆದಿದೆ. ನ.3 ರಂದು ಗುಜರಾತ್‌ನ 8 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಬಿಹಾರದಲ್ಲಿ ಎನ್‌ಡಿಎ ಹಾಗೂ ಮಹಾಘಟಬಂಧನ್ ಮೈತ್ರಿ ನಡುವೆ ಬಿರುಸಿನ ಸ್ಪರ್ಧೆ ನಡೆಯುತ್ತಿದೆ.

ವಿವಿಧ ರಾಜ್ಯಗಳ ಉಪ ಚುನಾವಣೆಗಳಲ್ಲಿ ಮಾತ್ರ ಬಿಜೆಪಿ ಭಾರಿ ಮುನ್ನಡೆ ಸಾಧಿಸುತ್ತಿದೆ. ಗುಜರಾತ್, ಉತ್ತರ ಪ್ರದೇಶ, ಮಧ್ಯ ಪ್ರದೇಶ, ತೆಲಂಗಾಣ, ಮಣಿಪುರ, ಕರ್ನಾಟಕ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು, ಬಳಿಕ ಅದರಲ್ಲಿ ಐವರು ಬಿಜೆಪಿಗೆ ಸೇರಿದ್ದರು. ಇದೀಗ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೂಡ ಪಡೆದಿದ್ದರು.