ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಗುರುವಾರ ಪತ್ರಿಕಾಗೋಷ್ಠಿ ಆಯೋಜಿಸಿದ್ದು, ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಿಸಲಿದೆ ಎಂದು ಹೇಳಲಾಗಿದೆ.
ಇತ್ತೀಚೆಗಷ್ಟೇ ಕೇಂದ್ರ ಚುನಾವಣಾ ಆಯೋಗ ಹಿಮಾಚಲ ಪ್ರದೇಶದ ಚುನಾವಣೆಗೆ ದಿನಾಂಕ ಘೋಷಿಸಿತ್ತು. ಅಂದೇ ಗುಜರಾತ್ ವಿಧಾನಸಭೆಗೂ ಚುನಾವಣೆ ಘೋಷಣೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು.