Thursday, 12th December 2024

‘ರಾಜಮಾತೆ’ ಜನ್ಮಶತಮಾನೋತ್ಸವ ಸ್ಮರಣಾರ್ಥ 100 ರೂ. ನಾಣ್ಯ ಬಿಡುಗಡೆ

ನವದೆಹಲಿ : ಗ್ವಾಲಿಯಾರ್ ‘ರಾಜಮಾತೆ’ ಎಂದೇ ಖ್ಯಾತ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ 100 ರೂ. ನಾಣ್ಯವನ್ನು ಬಿಡುಗಡೆ ಮಾಡಿದರು.

ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ರಾಜಮಾತೆ ಸಿಂಧ್ಯಾ ಅವರು ತಮ್ಮ ಜೀವನವನ್ನು ಜನರಿಗಾಗಿ ಅರ್ಪಿಸಿದರು. ತ್ರಿವಳಿ ತಲಾಖ್ ವಿರುದ್ಧ ಕಾನೂನು ಮಾಡಿರುವುದರಿಂದ ದೇಶವು ರಾಜಮಾತೆ ಸಿಂಧ್ಯಾ ಅವರ ಮಹಿಳಾ ಸಬಲೀಕರಣದ ದೃಷ್ಟಿಕೋನವನ್ನು ಮುನ್ನಡೆಸುತ್ತಿದೆ ಎಂದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ 100 ರೂ. ನಾಣ್ಯವನ್ನು ಬಿಡುಗಡೆ ಮಾಡಿದ್ದು, ಈ ವಿಶೇಷ ನಾಣ್ಯವನ್ನು ಹಣಕಾಸು ಸಚಿವಾಲಯ ಮುದ್ರಿಸಿದೆ.