Tuesday, 10th September 2024

ಜಿಲ್ಲಾಧಿಕಾರಿ ಕಚೇರಿ ಮುಂದೆ ಸೊಂಟ ಬಳುಕಿಸಿ ಕುಣಿದ ಯುವತಿ

ಗ್ವಾಲಿಯರ್: ಯುವತಿಯೊಬ್ಬಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿಂದಿಯ ಪ್ರಸಿದ್ಧ ಹಾಡಿಗೆ ಹೆಜ್ಜೆ ಹಾಕಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣ ಗಳಲ್ಲಿ ವೈರಲ್​ ಆಗಿದೆ.

ಮಧ್ಯಪ್ರದೇಶದ ಗ್ವಾಲಿಯರ್​ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಯುವತಿಯೊಬ್ಬಳು ಹಿಂದಿಯ ಪ್ರಸಿದ್ದ ಹಾಡು ಟಿಪ್​ ಟಿಪ್​ ಬರ್ಸಾ ಪಾನಿ ಹಾಡಿಗೆ ಬೋಲ್ಡ್​​ಆಗಿ ಸೊಂಟ ಬಳುಕಿಸಿದ್ದಾಳೆ. ಹಾಡಿನಲ್ಲಿ ಆಕೆ ರವೀನಾ ಟಂಡನ್​ರನ್ನು ಅನುಕರಣೆ ಮಾಡಲು ಮುಂದಾಗಿದ್ದು, ಈ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಲವರು ಯುವತಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣದ ಯುಗದಲ್ಲಿ ಯುವ ಪೀಳಿಗೆಯೂ ಒಂದಿಲ್ಲೊಂದು ಕೆಲಸಕ್ಕೆ ಕೈ ಹಾಕಿ ಪೇಚಿಗೆ ಸಿಲುಕುತ್ತಾರೆ. ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಿದರು ದಿನದಿಂದ ದಿನಕ್ಕೆ ಈ ರೀತಿಯ ಪ್ರಕರಣಗಳು ಹೆಚ್ಚುತ್ತಿರುತ್ತವೆ.

 

Leave a Reply

Your email address will not be published. Required fields are marked *