ಜ್ಞಾನವಾಪಿ ಮಸೀದಿಯೊಳಗೆ ಸರ್ವೆ ಮಾಡುವ ಸಮಯದಲ್ಲಿ ‘ಶಿವಲಿಂಗ’ ಪತ್ತೆ ಯಾಗಿತ್ತು ಎನ್ನಲಾಗಿತ್ತು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠ ವಿಚಾರಣೆ ನಡೆಸಲಿದೆ.
ಮೇ 20ರಂದು ಸುಪ್ರೀಂ ಕೋರ್ಟ್ ಜ್ಞಾನವಾಪಿ ಮಸೀದಿಯ ಮೇಲೆ ಹಿಂದೂ ಭಕ್ತರು ಸಲ್ಲಿಸಿದ ಸಿವಿಲ್ ಮೊಕದ್ದಮೆಯನ್ನು ಸಿವಿಲ್ ನ್ಯಾಯಾಧೀಶರಿಂದ (ಹಿರಿಯ ವಿಭಾಗ) ವಾರಾಣಸಿಯ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿತ್ತು.
1991ರ ಕಾನೂನಿನಿಂದ ಸಿವಿಲ್ ಮೊಕದ್ದಮೆಯನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ ಮಸೀದಿ ಸಮಿತಿಯು ಸಲ್ಲಿಸಿದ ಸಿವಿಲ್ ಪ್ರೊಸೀಜರ್ ಕೋಡ್ ಆದೇಶ 7 ನಿಯಮ 11ರ ಅಡಿಯಲ್ಲಿ ಅರ್ಜಿಯ ಆದ್ಯತೆಯನ್ನು ನಿರ್ಧರಿಸಲು ಜಿಲ್ಲಾ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.