ನವದೆಹಲಿ: ಜ.22 ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆ ಕೇಂದ್ರ ಸರ್ಕಾರ ಅರ್ಧದಿನ ಸರ್ಕಾರಿ ರಜೆ ಘೋಷಣೆ ಮಾಡಿದೆ ಎಂದು ತಿಳಿದು ಬಂದಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಜ.22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ‘ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ’ ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಬಂದ್ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ಕಾರಿ ನೌಕರರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಇದಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತದ ಭಗವಾನ್ ರಾಮನ ಅಂಚೆ ಚೀಟಿಗಳನ್ನು ಹೊಂದಿರುವ ಪುಸ್ತಕವನ್ನು ಬಿಡುಗಡೆ ಮಾಡಿದರು.