Wednesday, 11th December 2024

ಹಾಲ್ಮಾರ್ಕ್ ಮಾಡಿದ ಚಿನ್ನದ ಆಭರಣ ಮಾರಾಟಕ್ಕೆ ಏಪ್ರಿಲ್‌ನಲ್ಲಿ ನಿಷೇಧ

ವದೆಹಲಿ: ಆರು ಅಂಕಿಗಳ ಕೋಡ್ ಇಲ್ಲದೆ ಹಾಲ್ಮಾರ್ಕ್ ಮಾಡಿದ ಚಿನ್ನದ ಆಭರಣಗಳು ಮತ್ತು ಚಿನ್ನದ ಕಲಾಕೃತಿಗಳ ಮಾರಾಟವನ್ನು ಮುಂದಿನ ತಿಂಗಳಿನಿಂದ ನಿಷೇಧಿಸಲಾಗುವುದು.

ಗ್ರಾಹಕ,ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದು, ಮೈಕ್ರೋ ಸೇಲ್ ಘಟಕಗಳಲ್ಲಿ ಗುಣಮಟ್ಟದ ಸಂಸ್ಕೃತಿಯನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.

1ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ, ಆರು-ಅಂಕಿಯ ಆಲ್ಫಾನ್ಯೂಮರಿಕ್ HUID – ವಿಶಿಷ್ಟ ಗುರುತಿನ ಸಂಖ್ಯೆಯೊಂದಿಗೆ ಹಾಲ್‌ಮಾರ್ಕ್ ಮಾಡಲಾದ ಚಿನ್ನದ ಆಭರಣಗಳು ಮತ್ತು ಚಿನ್ನದ ಕಲಾಕೃತಿಗಳ ಮಾರಾಟ ವನ್ನು ಮಾತ್ರ ಅನುಮತಿಸಲಾಗುವುದು ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

2023 ರ ಮಾರ್ಚ್ 3 ರಂದು ಕೇಂದ್ರ ಕ್ಯಾಬಿನೆಟ್ ಸಚಿವ ಪಿಯೂಷ್ ಗೋಯಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನ ಪರಿಶೀಲನಾ ಸಭೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.