Thursday, 12th December 2024

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧ ಪ್ರಕರಣ ದಾಖಲು

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ 16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 32 ವರ್ಷದ ಮಹಿಳೆ ವಿರುದ್ಧ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿ ದ್ದಾರೆ.
ಆರೋಪಿ ಮಹಿಳೆಗೆ ಮೂವರು ಮಕ್ಕಳಿದ್ದು, ನಾಸಿಕ್ನಲ್ಲಿರುವ ತಮ್ಮ ಸಂಬಂಧಿಕರ ನೆರೆಹೊರೆಯಲ್ಲಿ ವಾಸಿಸುತ್ತಿದ್ದರು ಎಂದು ಬಾಲಕನ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಮಹಿಳೆ ಆಗಾಗ ಮುಂಬೈಗೆ ಬಂದು ಬಾಲಕನೊಂದಿಗೆ ಸ್ನೇಹ ಬೆಳೆಸುತ್ತಿದ್ದರು. ಆಕೆ ಆತನಿಗೆ ಮದ್ಯ ಸೇವಿಸು ವಂತೆ ಮಾಡಿ ಆತನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾರೆ ಎಂದು ಥಾಣೆಯ ಕಲ್ಯಾಣ್ನಲ್ಲಿರುವ ಕೋಲ್ಸೆವಾಡಿ ಪೊಲೀಸ್ ಠಾಣೆಯ ಅಧಿಕಾರಿ ದೂರನ್ನು ಉಲ್ಲೇಖಿಸಿ ತಿಳಿಸಿದ್ದಾರೆ.
ಆಕೆ ಆತನಿಗೆ ಆಕ್ಷೇಪಾರ್ಹ ವಿಡಿಯೋಗಳನ್ನು ತೋರಿಸುತ್ತಿದ್ದರು. ಇದು 2019 ರಿಂದ 2022ರ ಡಿಸೆಂಬರ್ ವರೆಗೆ ಸಂಭವಿಸಿದೆ. ನಂತರ ಹುಡುಗನ ತಾಯಿ ಈ ಬಗ್ಗೆ ತಿಳಿದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.