ಚಂಡೀಗಢ: ಹರಿಯಾಣ(Haryana Assembly Election)ದಲ್ಲಿ ಬಿಜೆಪಿ(BJP) ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಇಂದು ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ(Nayab Singh Saini) ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ(Haryana CM Swearing-in Ceremony) ಸ್ವೀಕರಿಸಿದ್ದಾರೆ. ಸೈನಿ ಅವರು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಐತಿಹಾಸಿಕ ಮೂರನೇ ಸತತ ಗೆಲುವಿನತ್ತ ಮುನ್ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ(PM Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾದರು.
#WATCH | Nayab Singh Saini takes oath as Haryana CM for the second consecutive time, in Panchkula
— ANI (@ANI) October 17, 2024
Prime Minister Narendra Modi, Union Home Minister Amit Shah, BJP national president JP Nadda, Defence Minister Rajnath Singh, UP CM Yogi Adityanath and other CMs, Deputy CMs, Union… pic.twitter.com/WK9ljGLwzd
ಪಂಚಕುಲದ ಪರೇಡ್ ಮೈದಾನದಲ್ಲಿ ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್, ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಸೇರಿದಂತೆ ವಿವಿಧ ಹಲವು ಗಣ್ಯರು ಉಪಸ್ಥಿತರಿದ್ದರು. ಸೈನಿಯವರಿಗೆ ರಾಜ್ಯಪಾಲ ಬಂಡಾರು ದತ್ತಾತ್ರೆಯ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಪ್ರಮಾಣವಚನಕ್ಕೂ ಮೊದಲು, ಸೈನಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿಯ ಸಂದರ್ಭದಲ್ಲಿ ಪಂಚಕುಲದ ವಾಲ್ಮೀಕಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬುಧವಾರ, ಸೈನಿ ಅವರು ರಾಜ್ಯಪಾಲ ದತ್ತಾತ್ರೇಯ ಅವರನ್ನು ಭೇಟಿ ಮಾಡಿದರು ಮತ್ತು ಪಂಚಕುಲದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.
#WATCH | Prime Minister Narendra Modi reaches Dussehra Ground in Sector 5, Panchkula, for the swearing-in ceremony of Haryana CM-designate Nayab Singh Saini and the new Haryana government pic.twitter.com/pycGFJoZMY
— ANI (@ANI) October 17, 2024
ಹರಿಯಾಣ ಫಲಿತಾಂಶ
ಭಾರೀ ನೆಕ್ ಟು ನೆಕ್ ಫೈಟ್ ನಡುವೆಯೇ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬಂದಿದೆ. 90 ಅಸೆಂಬ್ಲಿ ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟ ಬಹುಮತ ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿತ್ತು. ಆಮೂಲಕ ಚುನಾವಣೋತ್ತರ ಸಮೀಕ್ಷೆಯನ್ನೂ ಹುಸಿ ಮಾಡಿತ್ತು. ಮತ್ತೊಂದೆಡೆ ಹತ್ತು ವರ್ಷಗಳ ಬಳಿಕ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ 37 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
2019 ರಿಂದ ಮಾರ್ಚ್ 2024 ರವರೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಜೆಪಿ ತೀರ ಮುಖಭಂಗ ಎದುರಿಸಿದ್ದು, ಮತ್ತೊಂದೆಡೆ ಎಎಪಿ ಕೂಡ ತನ್ನ ಖಾತೆಯನ್ನು ತೆರೆಯಲು ವಿಫಲವಾಗಿದೆ. ಇನ್ನು ಐಎನ್‌ಎಲ್‌ಡಿ ಕೇವಲ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಾವಿತ್ರಿ ಜಿಂದಾಲ್ ಸೇರಿದಂತೆ ಮೂವರು ಪಕ್ಷೇತರರೂ ಗೆದ್ದು ಬಿಜೆಪಿಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Haryana CM Swearing-in Ceremony:ಹರಿಯಾಣ ಸಿಎಂ ಆಗಿ ಇಂದು ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ