Thursday, 12th December 2024

ಹರ್ಯಾಣದಲ್ಲೂ ಜೂನ್ 7 ರವರೆಗೆ ಲಾಕ್‌ಡೌನ್ ವಿಸ್ತರಣೆ

ಚಂಡೀಗಡ: ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್‌ಡೌನ್ ವಿಸ್ತರಿಸಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭಾನುವಾರ ಆದೇಶಿಸಿದ್ದಾರೆ.

‘ಕೋವಿಡ್ ಲಾಕ್‌ಡೌನ್ ಅನ್ನು ಜೂನ್ 7 ರವರೆಗೆ ವಿಸ್ತರಿಸಲು ನಿರ್ಧರಿಸಿದ್ದೇವೆ. ಶಿಕ್ಷಣ ಸಂಸ್ಥೆಗಳು ಜೂನ್ 15 ರವರೆಗೆ ಮುಚ್ಚಲ್ಪ ಡುತ್ತವೆ’ ಎಂದು ಹೇಳಿದರು.

ಹೊಸ ಲಾಕ್‌ಡೌನ್ ಮಾರ್ಗಸೂಚಿಗಳ ಪ್ರಕಾರ, ಅಂಗಡಿಗಳಿಗೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ರಾತ್ರಿ ಕರ್ಫ್ಯೂ ಆದೇಶವು ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಇರುತ್ತದೆ.

ಹರಿಯಾಣದಲ್ಲಿ ಶನಿವಾರ ಹೊಸದಾಗಿ 1868 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 7,53,937ಕ್ಕೆ ಏರಿಕೆಯಾಗಿದೆ. ಸದ್ಯ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 23,094 ಆಗಿದ್ದರೆ, 7,22,711 ಜನರು ಈವರೆಗೆ ಚೇತರಿಸಿ ಕೊಂಡಿದ್ದಾರೆ.