Wednesday, 11th December 2024

ಬಿಡಿಭಾಗಗಳ ಘಟಕದಲ್ಲಿ ಬಾಯ್ಲರ್ ಸ್ಫೋಟ: ನಾಲ್ವರು ಕಾರ್ಮಿಕರ ಸಾವು

ರೆವಾರಿ: ಜಿಲ್ಲೆಯ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸಂತ್ರಸ್ತರಲ್ಲಿ ಮೂವರು ಮಂಗಳವಾರ ರಾತ್ರಿ ರೋಹ್ಟಕ್‌ನ ಪಿಜಿಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಮತ್ತೊಬ್ಬರು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಇನ್‌ಸ್ಪೆಕ್ಟರ್ ಜಗದೀಶ್ ಚಂದರ್ ತಿಳಿಸಿದ್ದಾರೆ.

ಮೃತರನ್ನು ಉತ್ತರ ಪ್ರದೇಶದ ನಿವಾಸಿಗಳಾದ ಅಜಯ್ (32), ವಿಜಯ್ (37), ರಾಮು (27), ರಾಜೇಶ್ (38) ಎಂದು ಗುರುತಿಸಲಾಗಿದೆ.