Thursday, 12th December 2024

ಸೋನಿಯಾ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ

ವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ 76 ನೇ ಹುಟ್ಟುಹಬ್ಬವನ್ನು ಆಚರಿಸಿ ಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿ ಸೋನಿಯಾ ಅವರಿಗೆ ಶುಭಾಶಯ ಗಳನ್ನು ಕೋರಿದ್ದಾರೆ.

‘ಶ್ರೀಮತಿ ಸೋನಿಯಾ ಗಾಂಧಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎರಡು ದಿನಗಳ ರಾಜಸ್ಥಾನ ಪ್ರವಾಸದಲ್ಲಿದ್ದು, ಗುರುವಾರ ಮಧ್ಯಾಹ್ನ ಜೈಪುರ ವಿಮಾನ ನಿಲ್ದಾಣಕ್ಕೆ ಬಂದ ನಂತರ ಅವರು ಹೆಲಿಕಾಪ್ಟರ್‌ನಲ್ಲಿ ಸವಾಯಿ ಮಾಧೋಪುರಕ್ಕೆ ತೆರಳಿದರು.

ರಣಥಂಬೋರ್‌ನ ಶೇರ್ ಬಾಗ್ ಹೋಟೆಲ್‌ನಲ್ಲಿ ಅವರು ತಂಗಿದ್ದು, ಅವರ ಹುಟ್ಟುಹಬ್ಬ ವನ್ನು ಆಚರಿಸಲಾಗುವುದು ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.