Saturday, 14th December 2024

ಕೋವಿಡ್‌- 19 ಲಸಿಕೆ: ಸುಪ್ರೀಂನಲ್ಲೇ ನಡೆಯಲಿ ಅರ್ಜಿಗಳ ವಿಚಾರಣೆ ?

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ, ಕೋವಿಡ್‌- 19 ಲಸಿಕೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್‌ ಗುರುವಾರ ತಡೆ ನೀಡಿದೆ.

ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸುವ ಬದಲು, ಎಲ್ಲ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಬೇಕು ಎಂದು ಕೋರಿ ಸೀರಂ ಇನ್‌ಸ್ಟಿಟ್ಯೂಟ್ ಆಫ್‌ ಇಂಡಿಯಾ (ಎಸ್‌ಐಐ) ಮತ್ತು ಭಾರತ್ ಬಯೋಟೆಕ್ ಅರ್ಜಿ ಸಲ್ಲಿಸಿವೆ.

ಕಂಪನಿಗಳು ಸಲ್ಲಿಸಿರುವ ಅರ್ಜಿಗಳ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಪೀಠವು ಕೇಂದ್ರ ಸರ್ಕಾರ ಹಾಗೂ ಇತರ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.

ಎಲ್ಲರಿಗೂ ಯಾವಾಗ ಲಸಿಕೆಯನ್ನು ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಸಲ್ಲಿಸುವಂತೆ ವಿವಿಧ ಹೈಕೋರ್ಟ್‌ಗಳು ಸೂಚನೆ ನೀಡಿವೆ. ಹೀಗಾಗಿ ಎಲ್ಲ ಅರ್ಜಿಗಳ ವಿಚಾರಣೆಯನ್ನು ಒಂದೇ ಕೋರ್ಟ್‌ನಲ್ಲಿ ನಡೆಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಎಸ್‌ಐಐ ಹಾಗೂ ಬಯೋಟೆಕ್‌ ಹೇಳಿವೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily